ಗುತ್ತಿಗೆದಾರನಿಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದ ಮೇರೆಗೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬಿಜೆಪಿ ಮುನಿರತ್ನ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಮೂರು ಸುಳಿಯಲ್ಲಿ ಬಿಜೆಪಿ ಶಾಸಕ ಸಿಲುಕಿಕೊಂಡಿದ್ದಾರೆ.
ಗುತ್ತಿಗೆದಾರ ಚಲುವರಾಜು ಎಂಬುವವರಿಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಕೂಡ ಮಾಡಿದ್ದಾರೆ ಎನ್ನಲಾದ ಆಡಿಯೋ ಎಲ್ಲೆಡೆ ಹರಿದಾಡಿತ್ತು. ಇದರ ಬೆನ್ನಲ್ಲೇ ಗುತ್ತಿಗೆದಾರ ಚಲುವರಾಜು, ಮುನಿರತ್ನ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.