Bangalore ಬಿ.ಜೆ.ಪಿ ರಾಜ್ಯ ಕಚೇರಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಆಚರಣೆ

Bhima Samskruthi
By -


ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನ ಮತ್ತು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು. ಇದರ ಅಂಗವಾಗಿ ಪದಾಧಿಕಾರಿಗಳು ಸರ್ದಾರ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. 
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ್, ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಚುನಾವಣಾ ನಿರ್ವಹಣಾ ಸಮಿತಿಯ ದತ್ತ ಗುರು ಹೆಗಡೆ, ಪ್ರಮುಖರು ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


Tags: