ದಾವಣಗೆರೆ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸಾವನ್ನಪ್ಪಿರುವ ಗಹ್ತನೆ ದಾವಣಗೆರೆ ಜಿಲ್ಲೆಯ
ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ತಿಮ್ಮೇಗೌಡ (34) ಮೃತರು. ಡಾ.ತಿಮ್ಮೇಗೌಡ ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರ ವೈದ್ಯರಾಗಿದ್ದರು.
ದಾವಣಗೆರೆಯಲ್ಲಿ ನಡೆದ ಮಕ್ಕಳ ಶ್ವಾಸಕೋಶ ತಜ್ಞರ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ವಾಪಾಸ್ ಆಗುತ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ವೈದ್ಯ ತೆರಳುತ್ತಿದ್ದ ಕಾರು ನುಜ್ಜುಗುಜ್ಜಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.