Belagavi ವಿಜೇಂದ್ರ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿ ಅಡ್ಡಾಡುವ ವಯಸ್ಸು ! ಎಂದ ಜಾರಕೀಹೊಳಿ

Bhima Samskruthi
By -

ಬೆಳಗಾವಿ, ಡಿಸೆಂಬರ್‌ : , ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಎರಡು ದಿನಗಳ ಹಿಂದೆಯೇ ಶೋಕಾಸ್‌ ನೋಟಿಸ್ ಬಂದಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರ. ಆದರೆ, ವಿಜಯೇಂದ್ರ, ಬಿಎಸ್‌ ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ಸಮನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದರು.

ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರನ್ನು ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ಹೇಳುತ್ತೇನೆ ಎಂದು ಹೇಳಿದರು.

Tags: