ಮುದ್ದೇಬಿಹಾಳ: ಕರಾಟೆ ಡೋ ಕೆನ್ರ್ಯುಕನ್ ಶೂಟೋಕಾನ್ ಸ್ಟೈಲ್ ಇಂಡಿಯಾ ಹಾಗೂ ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ಸಂಘ ವತಿಯಿಂದ ಕೊಡಮಾಡುವ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿಯೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿಗೆ ಲಭಿಸಿದೆ.
ಕರಾಟೆ ಶಿಕ್ಷಕನಾಗಿ ಹಲವು ವರ್ಷಗಳ ಸೇವೆ ಸಲ್ಲಿಸುವದರ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರ ಸೇರಿ ಇತರೆ ಕ್ಷೇತ್ರಗಳಲ್ಲಿ ಎಲೆ ಮರೆ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವದನ್ನು ಗುರುತಿಸಿ
ಡಿ.8 ರಂದು ಕಾರವಾರದಲ್ಲಿ ಆಯೋಜಿಸಲಾದ ಪ್ರಥಮ ಕರಾಟೆ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಶಾರದಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.