ತುಮಕೂರು : ಪಿಡಿಒ ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಲಾ ಕಾಲೇಜಿನ ಕೇಂದ್ರವೊಂದರಲ್ಲಿ ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಓರ್ವ ಅಭ್ಯರ್ಥಿಯನ್ನು ತುಮಕೂರಿನ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ನಡೆಯುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಬೆಂಗಳೂರಿನ ರಾಮಮೂರ್ತಿ ನಗರದ ಅಭ್ಯರ್ಥಿಯೊಬ್ಬ ಬ್ಲೂಟೂತ್ ಸಾಧನ ಬಳಸಿ ಅಕ್ರಮ ಮಾಡುತ್ತಿರುವುದು ಸಿಸಿ ಕ್ಯಾಮರಾ ಕಂಟ್ರೋಲ್ ರೂಮ್ ನಲ್ಲಿ ಕೂತು ವೀಕ್ಷಿಸುತ್ತಿದ್ದ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕೊಠಡಿಗೆ ತೆರಳಿ ಆತನನ್ನು ವಿಚಾರಣೆ ನಡೆಸಲು ಮುಂದಾದಾಗ,
ಆತ ನೆಪ ಹೇಳಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನನ್ನು ಹಿಡಿದುಕೊಂಡ ಸಿಬ್ಬಂದಿ, ಭದ್ರತೆಗೆ ನಿಯೋಜನೆಗೊಂಡ ಪೊಲೀಸರ ವಶಕ್ಕೆ ನೀಡಲಾಗಿದೆ. ಸದ್ಯ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.