ಬೆಂಗಳೂರು: ಸಾವಿರ ಕೆ.ಜಿ ಗಂಧದ ಕಟ್ಟಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಶಾಸಕ ಗಣಿಗ ರವಿ ತಿಳಿಸಿದ್ದಾರೆ.
ಇಂದು ಎಸ್‌ಎಂಕೆ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ ರೈತರು ಗಂಧದ ಮರವನ್ನು ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದರು.
ಹೀಗಾಗಿ ಅವರ ಅಂತ್ಯಸಂಸ್ಕಾರವನ್ನು ಗಂಧದ ಕಟ್ಟಿಗೆಯಲ್ಲಿ ನೆರವೇರಿಸಲಾಗುತ್ತದೆ ಎಂದರು.
ಮಂಡ್ಯದ ನೂತನ ಹೆರಿಗೆ ಆಸ್ಪತ್ರೆಗೆ ಹಾಗೂ ಬಿ ಹಸೂರು ಕಾಲೋನಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಎಸ್ ಎಂಕೆ ಹೆಸರು ಇಡಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೊತೆಗೆ ಮಂಡ್ಯದಲ್ಲಿ ಒಂದು ಪಾರ್ಕಿಗೆ ಎಸ್‌ಎಂ ಕೃಷ್ಣ ಅವರ ಹೆಸರು ಇಡಲಾಗುತ್ತದೆ ಎಂದು ಹೇಳಿದರು.