ಸ್ಯಾಂಡಲ್‌ವುಡ್ ಹಿರಿಯ ನಟ ಸರಿಗಮ ವಿಜಿ ನಿಧನ !
ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಸರಿಗಮ ವಿಜಿ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸರಿಗಮ ವಿಜಿ ಯಶವಂತ ಪುರ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಜನವರಿ 15ರಂದು ಸರಿಗಮ ವಿಜಿ ಇಹಲೋಕ ತ್ಯಜಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ಸೇರಿ ವಾರಗಳಾಗುತ್ತಾ ಬಂದಿತ್ತು. ಈ ಬಗ್ಗೆ ಅವರ ಮಗ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸರಿಗಮ ವಿಜಿ ನಿಧನರಾಗಿದ್ದಾರೆ. ಕನ್ನಡದ ಹಾಸ್ಯ ನಟ ಹಾಗೂ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಸರಿಗಮ ವಿಜಿ ಕೊನೆಯುಸಿರೆಳೆದಿದ್ದಾರೆ.
ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ತಮ್ಮ ಜನವರಿ 15ರ ಬೆಳಿಗ್ಗೆ 9:45ಕ್ಕೆ ನಿಧನರಾಗಿದ್ದಾರೆ. ತಮ್ಮ 76ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.