ಹಲವು ದಶಕಗಳ ನಂತರ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅಮೆರಿಕ ಸಂಸತ್ತಿನ ಒಳಗೆ ನಡೆಸುತ್ತಿರುವುದು ಇದೇ ಮೊದಲು. ಅಮೆರಿಕದಲ್ಲಿ ವಿಪರೀತ ಚಳಿ ಇರುವುದರಿಂದ ಸಂಸತ್ತಿನ ಒಳಗಡೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗುತ್ತಿದೆ. ಡೊನಾಲ್ಡ್ ಟ್ರಂಪ್ ಎರಡು ಬೈಬಲ್ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 1955 ರಲ್ಲಿ ಅವರ ತಾಯಿ ಅವರಿಗೆ ಬೈಬಲ್ ಅನ್ನು ನೀಡಿದ್ದರು, ಆ ಬೈಬಲ್ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತದೆ.
ಅಂದಹಾಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಕೇವಲ 35 ಪದಗಳನ್ನು ಒಳಗೊಂಡಿದೆ. ಟ್ರಂಪ್ ಅವರು ಈ ರೀತಿ ಪ್ರಮಾಣವಚನ ಸ್ವೀಕರಿಸಲಿಸದ್ದಾರೆ. ‘ನಾನು ಯುನೈಟೆಡ್ ಸ್ಟೇಟ್ಸ್‌ನ ಅಧ್ಯಕ್ಷರ ಹುದ್ದೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಮತ್ತು ನನ್ನ ಸಾಮರ್ಥ್ಯದ ಅತ್ಯುತ್ತಮವಾಗಿ ಯುನೈಟೆಡ್ ಸ್ಟೇಟ್ಸ್‌ನ ಸಂವಿಧಾನವನ್ನು ಸಂರಕ್ಷಿಸಿ, ರಕ್ಷಿಸುತ್ತೇನೆ ಮತ್ತು ರಕ್ಷಿಸುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ.’
ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶ್ವದಾದ್ಯಂತದ ಪ್ರಸಿದ್ಧ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಇವರಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರಿಂದ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ, ಚೀನಾದ ಕಡೆಯಿಂದ ಉಪಾಧ್ಯಕ್ಷ ಹಾನ್ ಜೆಂಗ್ ಪ್ರಮಾಣ ವಚನದಲ್ಲಿ ಭಾಗವಹಿಸಲಿದ್ದಾರೆ.