ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದಕ್ಕೆ ಒಟ್ಟು ಏಳು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಅದರಲ್ಲಿ ಇದೀಗ 2 ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು. ಕರ್ನಾಟಕ ಬಜೆಟ್ ಮಂಡನೆ ಮಾಡಿದ ನಂತರ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸುದೀರ್ಘ ಸಭೆ ನಡೆಯುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರು ಅನಾರೋಗ್ಯದ ಸಮಸ್ಯೆ ಹಾಗೂ ರಾಜ್ಯ ಬಜೆಟ್ ಮಂಡನೆಯಲ್ಲಿ ಬ್ಯೂಸಿಯಾಗಿರುವುದರಿಂದ ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಷಯವನ್ನು ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಇನ್ನು ಇನ್ನಷ್ಟೇ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕಿದೆ. ಅದೇ ತಮಿಳುನಾಡು ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇನ್ನು ಬೆಂಗಳೂರು 2ನೇ ವಿಮಾನ ನಿಲ್ದಾಣವನ್ನು ದಕ್ಷಿಣ ಭಾರತದ ಈ ಒಂದು ಜಿಲ್ಲೆಯಲ್ಲಿ ಮಾತ್ರ ನಿರ್ಮಾಣ ಮಾಡಲು ಸಾಧ್ಯವಿಲ್ಲ ಯಾಕೆ ಎನ್ನುವ ವಿವರ ನೋಡೋಣ.
ರಾಜ್ಯದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಇನ್ನಿಲ್ಲದಷ್ಟು ಚರ್ಚೆಗಳು ನಡೆದಿವೆ. ಅದರಲ್ಲೂ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ ಮೇಲೆಯೇ ಈ ವಿಚಾರದಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕಾರ್ಯ ಪ್ರವೃತ್ತವಾಗಿದೆ. ಇನ್ನು ಬೆಂಗಳೂರಿನ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೆಲಮಂಗಲ, ಬಿಡದಿ ಹಾಗೂ ಕನಕಪುರ ರಸ್ತೆಗಳನ್ನು ಸೆಜೆಸ್ಟ್ ಮಾಡಲಾಗಿದೆ. ಆದರೆ, ಈ ಒಂದು ಜಿಲ್ಲೆಯಲ್ಲಿ ಮಾತ್ರ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲ. ಅದೇ ಬೆಂಗಳೂರು.
ಹೌದು ಬೆಂಗಳೂರಿನ ವಿಮಾನ ನಿಲ್ದಾಣ ಅಥವಾ ಬೆಂಗಳೂರು ಹೆಸರಿನ ವಿಮಾನ ನಿಲ್ದಾಣವನ್ನು ಬೆಂಗಳೂರಿನಲ್ಲಿ ಯಾಕೆ ನಿರ್ಮಾಣ ಮಾಡುತ್ತಿಲ್ಲ ಎನ್ನುವ ಪ್ರಶ್ನೆ ನಿಮಗೆ ಎದುರಾಗಿರಬಹುದು. ಅದಕ್ಕೆ ಉತ್ತರ ಇಲ್ಲಿದೆ.
ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ: ಇನ್ನು ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲ. ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ 4,000 ಸಾವಿರದಿಂದ 5,000 ಸಾವಿರ ಎಕರೆ ಜಾಗ ಬೇಕು ಅಂತ ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಇಷ್ಟೊಂದು ವಿಸ್ತೀರ್ಣವಾದ ಜಾಗ ಖಾಲಿ ಇಲ್ಲ. ಅಲ್ಲದೆ ಬೆಂಗಳೂರು ಈಗಾಗಲೇ ಅಭಿವೃದ್ಧಿಯಾಗಿದ್ದು, ವಿಮಾನದ ಸಂಚಾರದ ವಿಷಯದಲ್ಲಿ ಆಕಾಶದ ಟ್ರಾಫಿಕ್ ಅಥವಾ ವಾಯುನೆಲೆಯ ಟ್ರಾಫಿಕ್ ಸಹ ಸಮಸ್ಯೆ ಆಗುತ್ತದೆ. ಈ ಕಾರಣಕ್ಕಾಗಿ ಎರಡನೇ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಸಾಧ್ಯವೇ ಇಲ್ಲ.
ಅಲ್ಲದೆ ಬೆಂಗಳೂರಿನಲ್ಲಿ ಈಗಾಗಲೇ ಎಚ್‌ಎಎಲ್ ವಿಮಾನ ನಿಲ್ದಾಣವಿದೆ. ಅಲ್ಲದೆ ಬೆಂಗಳೂರಿನ ಹೊರ ವಲಯದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣವಿದೆ. ಇನ್ನು ಒಂದು ವಿಮಾನ ನಿಲ್ದಾಣದಿಂದ ಇನ್ನೊಂದು ವಿಮಾನ ನಿಲ್ದಾಣದ ನಡುವೆ 150 ಕಿ.ಮೀ ವಾಯುನೆಲೆಯ / ವಿಮಾನ ಸಂಚರಿಸುವಾಗ ವ್ಯತ್ಯಾಸವಿರಬೇಕು ಎನ್ನುವುದು ಸೇರಿದಂತೆ ಹಲವು ನಿಯಮಗಳು ಇವೆ. ಹೀಗಾಗಿ, ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಹೇಳಲಾಗಿದೆ