ಬೆಂಗಳೂರು,: ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್ ಖಾತೆಯನ್ನು ತೆರೆಯುವ ರಾಜ್ಯ ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಸೇರಿದಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ. ಜತೆಗೆ ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ ಈ ಬಗ್ಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಕಟಣೆ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹಿತಾಸಕ್ಷತಿಗಳನ್ನು ಕಾಪಾಡುವ ಸಲುವಾಗಿ ರಾಜ್ಯ ಸಚಿವ ಸಂಪುಟದ ಸಭೆಯ ಈ ಕೆಳಗಿನ ಯೋಜನೆಗಳಿಗೆ ಅನುಮೋದನೆ ನೀಡಿದೆ.
1.ವಿವಿಧ ಬ್ಯಾಂಕ್‌ಗಳು ಒದಗಿಸುವ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲ ಅಧಿಕಾರಿಗಳು/ನೌಕರರಿಗೆ (ಸರ್ಕಾರಿ/ಸರ್ಕಾರಿ ಸಂಸ್ಥೆಗಳು ಇತ್ಯಾದಿ) ಕಡ್ಡಾಯಗೊಳಿಸುವುದು.
2.ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ ಪಿಎಂಜೆಜೆಬಿವೈ (PMJJBY) ಮತ್ತು ಪಿಎಂಎಸ್‌ಬಿವೈ (PMSBY) ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು/ನೌಕರರನ್ನು ಪ್ರೋತ್ಸಾಹಿಸುವುದು.
3.ಬ್ಯಾಂಕುಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಲ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು/ನೌಕರರನ್ನು ಪ್ರೋತ್ಸಾಹಿಸುವುದು.
4. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದಂತೆ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು/ನೌಕರರು (ಸರ್ಕಾರಿ/ಸರ್ಕಾರಿ ಸಂಸ್ಥೆಗಳು ಸೇರಿದಂತೆ) 'ಸಂಬಳ ಪ್ಯಾಕೇಜ್' ಅಡಿಯಲ್ಲಿ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸುವುದು.