ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಹೊರವಲಯದಲ್ಲಿ ಇಂದು ಮಧ್ಯಾಹ್ನ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಳಗಾವಿ: ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಹೊರವಲಯದಲ್ಲಿ ಇಂದು ಮಧ್ಯಾಹ್ನ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಲೇಭಾವಿ ಗ್ರಾಮದಲ್ಲಿ ಯುವಕನ ಜೊತೆ ಬಸ್ ಹತ್ತಿದ ಯುವತಿಯೋರ್ವಳು ಮರಾಠಿಯಲ್ಲಿ ಮಾತನಾಡಿದ್ದಳು. ಆಗ ನಾನು ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ಜನರನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು 51 ವರ್ಷದ ಕಂಡಕ್ಟರ್ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ ತಿಳಿಸಿದ್ದಾರೆ.
ಟಿಕೆಟ್ ಪಡೆಯಲು ಯುವತಿ ಮರಾಠಿಯಲ್ಲಿ ಮಾತನಾಡಿದ್ದಳು. ಆಗ ನನಗೆ ಮರಾಠಿ ಬರಲ್ಲ ಎಂದು ನಾನು ಹೇಳಿದ್ದಕ್ಕೆ ಯುವತಿ ಮರಾಠಿ ಕಲಿಯಬೇಕು ಎಂದು ಹೇಳಿ ನನಗೆ ನಿಂದಿಸಿದರು. ಇದ್ದಕ್ಕಿದ್ದಂತೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿ ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಕಂಡಕ್ಟರ್ ಹೇಳಿದರು.