Mandya: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ಆಕ್ಸಿಡೆಂಟ್; ತಾಯಿ ಸಾವು, ನಡುರಸ್ತೆಯಲ್ಲೇ ಮಕ್ಕಳ ಆಕ್ರಂದನ!
ಮಂಡ್ಯದ ಮಳವಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ತಾಯಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮಂಡ್ಯ (ಮಾ.15): ಬೆಳ್ಳಂಬೆಳಗ್ಗೆ ಮಂಡ್ಯದ ಮಳವಳ್ಳಿ ಪಟ್ಟಣದ ಕೊಳ್ಳೆಗಾಲ ರಸ್ತೆಯ ಕಣಿಗಲ್ ಹಳ್ಳದ ಬಳಿ ಹೃದಯವಿದ್ರಾವಕ ಆಕ್ಸಿಡೆಂಟ್ ನಡೆದಿದೆ. ಇಬ್ಬರು ಹೆಣ್ಣುಮಕ್ಕಳನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಶಾಲೆಗೆ ಬಿಡಲು ಹೋಗುತ್ತಿದ್ದಾಗ, ಎಳನೀರು ತುಂಬಿಕೊಂಡು ಬರುತ್ತಿದ್ದ ಬುಲೊರೋ ವಾಹನ ಢಿಕ್ಕಿಯಾಗಿದೆ. ತಾಯಿ ನಡುರಸ್ತೆಯಲ್ಲೇ ಸಾವು ಕಂಡಿದ್ದಾರೆ. ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಮಕ್ಕಳ ಆಕ್ರಂದನ ಕರುಳುಹಿಂಡುವಂತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯ ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ಇಬ್ಬರು ಮಕ್ಕಳಿಗೆ ಗಾಯವಾಗಿದೆ.